ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ದುರ್ಮರಣ!

ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ.

ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ (35), ಸಂತೋಷ್ (43), ನೀಲಮ್ಮ (60) ಸೇರಿದಂತೆ 5 ಮಂದಿ ಅಸುನೀಗಿದ್ದಾರೆ.

ಬೀದರ್ ಮೂಲದ 12 ಮಂದಿ ಕ್ರೂಸರ್ ನಲ್ಲಿ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಕಾಶಿಯಂದ 20 ಕಿ.ಮೀ.ದರೂದಲ್ಲಿ ನಿಯಂತ್ರಣ ತಪ್ಪಿದ ಕ್ರೂಸರ್ ಲಾರಿಗೆ ಹಿಂಬದಿಯಿಂದ ಗುದ್ದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ 5 ಮಂದಿ ಅಸುನೀಗಿದ್ದು, ಮೂವರು ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಪತ್ತೆ ಕಾರ್ಯ ನಡೆದಿದೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.

ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

Post a Comment

Previous Post Next Post