ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಅಪಘಾತಕ್ಕೆ ಬಲಿ!

ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಎರಡು ಪ್ರತ್ಯೇಕ ಅಪಾಘಾತ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ.

ಗುಜರಾತ್ ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟಿದ್ದಾರೆ.

ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೀದರ್ ನ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ವರ್ದಾ ಬಳಿ ಟಿಟಿ ಮತ್ತು ಲಾರಿ ನಡುವೆ ಡಿಕ್ಕಿ ಅಪಘಾತ ಸಂಭವಿಸಿದೆ. ಮೃತರು ಬೀದರ್​ನ ಓಲ್ಡ್ ಸಿಟಿಯ ದರ್ಜಿಗಲ್ಲಿಯವರು ಎಂದು ತಿಳಿದುಬಂದಿದೆ. ಟಿಟಿಯಲ್ಲಿದ್ದ ಇನ್ನುಳಿದ 14 ಜನರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

5 ದಿನದ ಹಿಂದೆ 16 ಜನರು ಟೆಂಪೊ ಟ್ರಾವೆಲರ್​ನಲ್ಲಿ ಉತ್ತರ ಪ್ರದೇಶದ ಪ್ರಯಾಗ್​ರಾಜ್​​ ಕುಂಭಮೇಳಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ನಂತರ ಕಾಶಿ, ರಾಮೇಶ್ವರ, ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ವಾಪಸ್​ ಬೀದರ್​ಗೆ ಬರುತ್ತಿದ್ದರು. ಮಂಗಳವಾರ ಬೆಳಗಿನ ಜಾವ ಟಿಟಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.

Post a Comment

Previous Post Next Post