ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ.
ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿತ್ತು.
ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರಿನಲ್ಲಿ ಬೃಹತ್ ಮಟ್ಟದದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ಆರಂಭಿಸಿದೆ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿವೆ.
ಮೂನ್ನೂರು ಮಂದಿಗೆ ಅನುಮತಿ ನೀಡಿರುವ ನ್ಯಾಯಾಲಯದ ನಿರ್ದೇಶನದಂತೆ ಹಾಗೂ ಯಾವುದೇ ಪ್ರಚೋಧನಕಾರಿ ಭಾಷಣ ಮಾಡದಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದ ಪಕ್ಕದ ಸ್ಪೋರ್ಟ್ಸ್ ಪೆವಿಲಿಯನ್ ಕ್ರೀಡಾಂಗಣದಲ್ಲಿ ಪ್ರತಿಭಟನೆಗೆ ಪೊಲೀಸರು ಸಿದ್ದತೆ ಮಾಡಿಕೊಟ್ಟಿದ್ದಾರೆ. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ತುಕಡಿಗಳ ನಿಯೋಜಿಸಿ ಪ್ರತಿಭಟನೆ ಕಾನೂನು ಚೌಕಟ್ಟಿನಲ್ಲಿ ನಡೆಯಲು ವ್ಯವಸ್ಥೆ ಕಲ್ಪಿಸಿದ್ದಾರೆ.