ವಿಷ್ಣುಪ್ರಿಯ ಚಿತ್ರದ ನಾಯಕ ನಟ ಶ್ರೇಯಸ್ ತುಮಕೂರು ಜಿಲ್ಲೆಯ ಶಿರಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪಾರಾಗಿದ್ದಾರೆ.
ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರರಾದ ಶ್ರೇಯಸ್ ಪ್ರಯಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆಯಲ್ಲಿ ನಡೆಯುತ್ತಿದ್ದ ಪ್ರಮೋಷನ್ ಕಾರ್ಯಕ್ರಮದಲ್ಲಿ ತೆರಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
Tags:
davanagere
k.mamju
k.manju
kananda actor shreyas
kannada film producer
kannada news
latest news
tumkaur
ಮನರಂಜನೆ