ವಾಹನ ಸವಾರರಿಗೆ ಸಿಹಿಸುದ್ದಿ: HSRP ನಂಬರ್ ಪ್ಲೇಟ್ ಬದಲಾವಣೆಗೆ ಮತ್ತೆ ಗಡುವು ವಿಸ್ತರಣೆ!

ಅತಿ ಸುರಕ್ಷಿತ ವಾಹನ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಮತ್ತೆ ರಿಲೀಫ್ ಸಿಕ್ಕಿದೆ.

ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿ ಗಡುವು ವಿಸ್ತರಿಸಿದಂತಾಗಿದೆ.

hsrpನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ 8 ತಿಂಗಳ ಕಾಲ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಆದಂತಾಗಿದೆ.

ಸಾರಿಗೆ ಇಲಾಖೆಗೆ ಅಧೀನ ಕಾರ್ಯದರ್ಶಿ ಪುಷ್ಪ ಶುಕ್ರವಾರ ಆದೇಶ ಹೊರಡಿಸಿದ್ದು, ಈ ಹಿಂದೆ ನೀಡಲಾಗಿದ್ದ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಸವಾರರು ನಿರಾಸಕ್ತಿ ತೋರುತ್ತಿದ್ದಾರೆ. ಮೂಲಗಳ ಪ್ರಕಾರ ಶೇ.50ಕ್ಕೂ ಹೆಚ್ಚು ವಾಹನಗಳು ಹೊಸ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದೇ ಇರುವುದು ಸರ್ಕಾರಕ್ಕೆ ತಲೆ ನೋವಾಗಿದೆ.

2019ಕ್ಕೂ ಮೊದಲು ನೋಂದಣಿಯಾದ ವಾಹನಗಳು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ. ಆದರೆ ಇದುವರೆಗೆ ಬಹುತೇಕ ವಾಹನ ಮಾಲೀಕರು ನಂಬರ್ ಪ್ಲೇಟ್ ಬದಲಿಸಿಕೊಳ್ಳದೇ ಇರುವುದು ಸಾರಿಗೆ ಇಲಾಖೆಗೆ ದೊಡ್ಡ ತಲೆನೋವಾಗಿದೆ.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

Post a Comment

Previous Post Next Post