ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ ಜಾರಿಗೊಳಿಸಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಂಬಂಧವೇ ಇಲ್ಲದ ಮೂರನೇ ವ್ಯಕ್ತಿಯಾದ ನನಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಭೈರತಿ ಸುರೇಶ್ ಮೇಲ್ಮನವಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರು ಇದೀಗ ಪ್ರಕರಣದಲ್ಲಿ ಸಿಎಂ ಹಾಗೂ ಸಿಎಂ ಪತ್ನಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ ಎಂದು ವರದಿ ನೀಡಿತ್ತು. ಇದೀಗ ವರದಿ ಹಿನ್ನೆಲೆಯಲ್ಲಿ ಹಾಗೂ ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ ಆದೇಶ ಆಧರಿಸಿ ಇಡಿ ಸಮನ್ಸ್ ಜಾರಿಗೊಳಿಸಲಾಗಿದೆ.

Post a Comment

Previous Post Next Post